Published
11 months agoon
By
Akkare News
ಕರ್ನಾಟಕದ 20ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.
ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ.