Published
20 hours agoon
By
Akkare Newsಡೀಸೆಲ್ ದರ ಏರಿಕೆ ವಿರೋಧಿಸಿ ಲಾರಿ ಮಾಲೀಕರ ಸಂಘ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿದೆ.
ಬೆಂಗಳೂರಿನಲ್ಲಿ ಲಾರಿ ಹಾಗೂ ಟ್ರಕ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಯಶವಂತಪುರದ ಟ್ರಕ್ ಟರ್ಮಿನಲ್ನಲ್ಲಿ ಲಾರಿಗಳು ಸಾಲು ಸಾಲಾಗಿ ನಿಂತಿರುವ ದೃಶ್ಯ ಕಂಡು ಬಂದಿದೆ.
ದಿನಸಿ, ತರಕಾರಿ, ಎಲೆಕ್ಟ್ರಾನಿಕ್ ವಸ್ತುಗಳನ್ನು ಸಗಾಟ ಮಾಡುವ ಲಾರಿಗಳು ಸಂಚಾರ ಸ್ಥಗಿತಗೊಳಿಸಿವೆ. ಹೆದ್ದಾರಿ ಹಾಗೂ ನಿಲ್ದಾಣಗಳಲ್ಲಿ ಲಾರಿ ನಿಲ್ಲಿಸಿ ಚಾಲಕರು ಕೂಡ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ.
ರಾಜ್ಯ ಸರ್ಕಾರ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಆದೇಶ ಹಿಂಪಡೆಯಬೇಕು, ರಾಜ್ಯದ ಹೆದ್ದಾರಿ ಟೋಲ್ಗಳಲ್ಲಿನ ಹಣ ವಸೂಲಿ ತಡೆಯಬೇಕು, ಗಡಿಗಳಲ್ಲಿ ಆರ್ಟಿಒ ಚೆಕ್ಪೋಸ್ಟ್ಗಳನ್ನು ತೆರವು ಮಾಡಬೇಕು, ಎಫ್ಸಿ ಫಿಟ್ನೆಸ್ ಶುಲ್ಕ ಏರಿಕೆ ಮಾಡಿರುವುದನ್ನು ಹಿಂಪಡೆಯಬೇಕು, ಗೂಡ್ಸ್ ವಾಹನಗಳಿಗೆ ಬೆಂಗಳೂರು ಪ್ರವೇಶ ನಿರ್ಬಂಧ ಆದೇಶ ಹಿಂಪಡೆಯಬೇಕು, ಲಾರಿ ಚಾಲಕರ ಮೇಲಿನ ಹಲ್ಲೆ, ದೌರ್ಜನ್ಯಗಳನ್ನು ತಡೆಯಬೇಕು ಎನ್ನುವುದು ಬೇಡಿಕೆಗಳಾಗಿವೆ.