Connect with us

ಇತರ

ಏ.24 ಪುತ್ತೂರಿನ ತಾಲೂಕು ಕಚೇರಿಯಲ್ಲಿ ” ಲೋಕಾಯುಕ್ತ ಜನಸಂಪರ್ಕ ಸಭೆ”

Published

on

ಪುತ್ತೂರು: ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರಿಂದ ಎ.24ರಂದು ಜನಸಂಪರ್ಕ ಸಭೆಯು ತಾಲೂಕು ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿಯಲ್ಲಿ ನಡೆಯಲಿದೆ.

 

ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಸಾರ್ವಜನಿಕರಿಂದ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ. ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ.

 

ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು ಅಥವಾ ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು.
ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-56೦೦೦1 ಈ ವಿಳಾಸಕ್ಕೂ ಸಲ್ಲಿಸಬಹುದು ಎಂದು ಮಂಗಳೂರು ವಿಭಾಗದ ಪ್ರಭಾರ ಅಧೀಕ್ಷಕ ಕುಮಾರಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement