Published
24 hours agoon
By
Akkare Newsಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಮರಾಪುರ ಗ್ರಾಮದ ಬಳಿ ಇಂದು ನಸುಕಿನ ಜಾವ ನಡೆದಿದೆ.
ಗೂಡ್ಸ್ ಪಿಕ್ ಅಪ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಅದರ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ನಾಗರಾಜ್, ಸೋಮು, ನಾಗಭೂಷಣ ಹಾಗೂ ಮುರಳಿ ಎಂದು ಗುರುತಿಸಲಾಗಿದೆ.
ಮೃತರು ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳಾಗಿದ್ದಾರೆ. ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್ ಗೆ ಗಂಭೀರ ಗಾಯವಾಗಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಾಲಕ ಚಿಕಿತ್ಸೆ ನೀಡಲಾಗುತ್ತಿದೆ. ಇವರು ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಪುರಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.