Connect with us

ಇತರ

ಪುತ್ತೂರು: ಜಾತ್ರಾ ಗದ್ದೆಯಲ್ಲಿ ಮಗುವಿನ ಚಿನ್ನದ ಸರ ಅಪಹರಣ

Published

on

ಇಲ್ಲಿನ ಮಹಾಲಿಂಗೇಶ್ವರ ದೇವಳದ ಜಾತ್ರಾ ಗದ್ದೆಯಲ್ಲಿ ಮಗುವಿನ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ. ಬಂಟ್ವಾಳ ತಾಲ್ಲೂಕಿನ ಪುಣಚ ಗ್ರಾಮದ ಮೂಡಾಯಿಬೆಟ್ಟು ಚಂದ್ರಶೇಖರ ನಾಯ್ಕ ಅವರು ಈ ಕುರಿತು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

ಪತ್ನಿ, ಪುತ್ರಿ ಜತೆ ದೇವರ ದರ್ಶನ ಪಡೆದು ದೇವರ ಗದ್ದೆಯಲ್ಲಿನ ಸಂತೆಗೆ ಹೋಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಹಿಂಬಾಲಿಸಿ ಪತ್ನಿಯ ಹೆಗಲ ಮೇಲಿದ್ದ ಮಗುವಿನ ಸುಮಾರು 8 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾನೆ. ಈ ವೇಳೆ ಹಿಂಬಾಲಿಸಿದಾಗ ಆತ ಕೊಲೆ ಮಾಡುವುದಾಗಿ ಬೆದರಿಸುತ್ತಾ ಜನರ ಮಧ್ಯದಲ್ಲಿ ಓಡಿ ಹೋಗಿ ತಪ್ಪಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

 

ಕಳವಾದ ಚಿನ್ನದ ಮೌಲ್ಯ ಸುಮಾರು ₹ 40 ಸಾವಿರ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ನಗರ ಠಾಣೆಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version