Published
4 hours agoon
By
Akkare Newsಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಏ. 19 ಮತ್ತು 20ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
19ರಂದು ಧರ್ಮಸ್ಥಳದಲ್ಲಿ ವಾಸ್ತವ್ಯ ಮಾಡಲಿದ್ದು, 20ರಂದು ಬೆಳಿಗ್ಗೆ 11ಕ್ಕೆ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 12ಕ್ಕೆ ಗುರುವಾಯನಕೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವರು.
2.30ಕ್ಕೆ ಎಕ್ಸೆಲ್ ವಿದ್ಯಾಸಂಸ್ಥೆಗೆ ಭೇಟಿ ಬಳಿಕ ಲಾಯಿಲ ರಾಘವೇಂದ್ರ ಮಠ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 3ಕ್ಕೆ ಕನ್ಯಾಡಿ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಸಂಜೆ 4ಕ್ಕೆ ಧರ್ಮಸ್ಥಳ ಕ್ಷೇತ್ರದ ಕಲ್ಯಾಣ ಮಂಟಪಗಳ ಸಮುಚ್ಛಯ ಉದ್ಘಾಟನೆ, ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ ಪೂಜೆ ನೆರವೇರಿಸಿ ರಾತ್ರಿ 8ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು.