Published
5 hours agoon
By
Akkare Newsಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ.
ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್ ಕೂಡ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ʼಎಕ್ಸ್ʼ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು.