Published
4 hours agoon
By
Akkare Newsಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜ ಅಂಟಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಜರಂಗದಳದ ಆರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಜಗತ್ ವೃತ್ತ ಹಾಗೂ ಇನ್ನಿತರ ಪ್ರಮುಖ ಪ್ರದೇಶಗಳಲ್ಲಿ ಪಾಕಿಸ್ತಾನ ಧ್ವಜಗಳನ್ನು ರಸ್ತೆಪಕ್ಕ, ಸಾರ್ವಜನಿಕ ಶೌಚಾಲಯಗಳ ಬಳಿ ಅಂಟಿಸಲಾಗಿದೆ. ಈ ಕುರಿತು ಮಾಹಿತಿ ಪಡೆದ ಗುಪ್ತಚರ ಇಲಾಖೆ ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಧ್ವಜಗಳನ್ನು ತೆರವುಗೊಳಿಸಿದರು.
ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಈ ಕುರಿತು ಪ್ರತಿಕ್ರಿಯಿಸಿ, “ಇತ್ತೀಚೆಗೆ ದೇಶಾದ್ಯಂತ ವಿವಿಧ ಸಂಘಟನೆಗಳು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲು ವಿಭಿನ್ನ ರೀತಿಯ ಪ್ರತಿಭಟನೆಗಳಿಗೆ ಮೊರೆಹೊಡೆದಿವೆ. ಕೆಲವರು ಯಾವುದೇ ಅಧಿಕಾರಿಗಳ ಅನುಮತಿ ಪಡೆಯದೇ ಪಾಕಿಸ್ತಾನ ಧ್ವಜ ಅಂಟಿಸಿರುವುದು ಬೆಳಕಿಗೆ ಬಂದಿದೆ. ಇದು ಭಯೋತ್ಪಾದನೆಗೆ ಸೇರುವಂತ ಕೃತ್ಯವಾಗದಿದ್ದರೂ, ಸಾರ್ವಜನಿಕ ಶಾಂತಿಯ ವಿರುದ್ಧವಾಗಿದೆ,” ಎಂದು ಹೇಳಿದರು. ಈ ವೇಳೆ ಆರು ಬಜರಂಗದಳದ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಘಟನೆ ಸಂಬಂಧ ಮುಂದಿನ ತನಿಖೆ ಜಾರಿಯಲ್ಲಿದೆ.