Published
4 hours agoon
By
Akkare Newsಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪಾಕಿಸ್ಥಾನದಿಂದ ಬಂದು ಮದುವೆಯಾಗಿ ನೆಲೆಸಿರುವ ಮೂರು ಮಂದಿ ಮಹಿಳೆಯರನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಓರ್ವ ಮಹಿಳೆ ನಗರದ ಹೊರವಲಯದ ವಾಮಂಜೂರು, ಇನ್ನೊಬ್ಬಾಕೆ ನಗರದ ಫಳ್ನೀರ್‌ನಲ್ಲಿ ವಾಸವಾಗಿದ್ದಾರೆ. ಮತ್ತೋರ್ವ ಮಹಿಳೆಯ ವಾಸವಿರುವ ಸ್ಥಳದ ಕುರಿತು ಮಾಹಿತಿ ಬಂದಿಲ್ಲ. ಈ ಮಹಿಳೆಯರು 12-13 ವರ್ಷಗಳ ಹಿಂದೆಯೇ ಮದುವೆಯಾಗಿ ನಗರಕ್ಕೆ ಬಂದು ವಾಸವಾಗಿದ್ದಾರೆ. ನಗರ ಪೊಲೀಸ್ ಆಯುಕ್ತಾಲಯದಿಂದ ಮಹಿಳೆಯರ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದ್ದು, ರಾಜ್ಯ ಗೃಹ ಇಲಾಖೆಗೆ ಕಳುಹಿಸಲಾಗಿದೆ.
ಮದುವೆಯಾಗಿ ಕುಟುಂಬದೊಂದಿಗೆ ವಾಸವಾಗಿರುವುದರಿಂದ, ಅವರನ್ನು ವಾಪಸು ಕಳುಹಿಸುವ ಬಗ್ಗೆ ವಿದೇಶಾಂಗ ಸಚಿವಾಲಯದಿಂದ ಯಾವ ರೀತಿಯ ನಿರ್ದೇಶನ ಬರುತ್ತದೆಯೋ ಅದರಂತೆ ಕ್ರಮ ವಹಿಸಲಾಗುವುದು. ದೀರ್ಘಕಾಲಿಕ ವೀಸಾ ಯೋಜನೆ ಮೂಲಕ ಅವರು ಭಾರತಕ್ಕೆ ಬಂದು ನೆಲೆಸಿದ್ದರು. ಸದ್ಯ ಈ ಬಗ್ಗೆ ಅಧಿಕೃತವಾಗಿ ಆದೇಶ ಬಂದಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಪಾಕಿಸ್ಥಾನಿ ಪ್ರಜೆಗಳು ಯಾರೂ ನೆಲೆಸಿಲ್ಲ.