Published
11 hours agoon
By
Akkare Newsರ‍್ಯಾಪಿಡೊ, ಉಬರ್ ಬೈಕ್ ಟ್ಯಾಕ್ಸಿ ಸೇವೆ ರದ್ದುಪಡಿಸಲು ಸರಕಾರ ಆದೇಶ
ಬೆಂಗಳೂರು: ಹೈಕೋರ್ಟ್ ಆದೇಶವನ್ನು ಅನುಸರಿಸಿ ರಾಜ್ಯದಲ್ಲಿ ಕರ್ನಾಟಕದಲ್ಲಿ ರ‍್ಯಾಪಿಡೊ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರ ಹಲವಾರು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ.
ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ಏಪ್ರಿಲ್ 2ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶ ನೀಡಿತ್ತು.