Published
10 hours agoon
By
Akkare Newsಬೆಂಗಳೂರು: ಪಾಕಿಸ್ಥಾನದ ಮೇಲೆ ಯುದ್ಧ ಬೇಡ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಭಾರತ ಉಳಿಯಬೇಕು ಎನ್ನುವುದು ನಮ್ಮ ನಿಲುವು ಎಂದರು.
ನಾವೆಲ್ಲರೂ ಭಾರತೀಯರು, ಎಲ್ಲರ ಪ್ರಾಣ ಕೂಡ ಮುಖ್ಯ. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ತೀರ್ಮಾನಗಳನ್ನು ತೆಗೆದುಕೊಂಡಿದೆ. ಪಾಕಿಸ್ಥಾನದ ವಿರುದ್ಧ ಕೇಂದ್ರ ಸರಕಾರ ತೆಗೆದುಕೊಂಡಿರುವ ತೀರ್ಮಾನಗಳಿಗೆ ಬದ್ಧ ಎಂದು ತಿಳಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.