Connect with us

ಇತರ

ಪುತ್ತೂರು : ಸರಕಾರಿ ವೈದ್ಯರಿಗೆ ಹಲ್ಲೆ ಯತ್ನ ಆರೋಪಿ ತಾಯಿ ಮಗನಿಗೆ ನಿರೀಕ್ಷಣಾ ಜಾಮೀನು ಮಂಜೂರು

Published

on

ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಅವರ ಜೊತೆ ಅನುಚಿತ ವರ್ತನೆ ಮಾಡಿ ಹಲ್ಲೆಗೆ ಯತ್ನ ನಡೆಸಿದ್ದ ಪ್ರಕರಣದಲ್ಲಿ ಆರೋಪಿಗಳಾದ ತಾಯಿ ಮಗನಿಗೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಘಟನೆಗೆ ಸಂಬಂಧಪಟ್ಟಂತೆ ಸುಳ್ಯ ಪದವಿನ ಜೊಹರಾ ಮತ್ತು ಅವರ ಮಗ ಸಮದ್‌ ಎಂಬುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದರು. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡರೂ ಬಂಧಿಸದೇ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯ ಬಳಿ ಪ್ರತಿಭಟನೆ ನಡೆದಿತ್ತು.

 

ಆರೋಪಿಯ ಪತ್ತೆಗೆ ಪೊಲೀಸರಿಗೆ ಗಡುವು ನೀಡಲಾಗಿತ್ತು. ಆದರೆ ಎರಡೆರಡು ಬಾರಿ ನೀಡಿದ್ದ ಗಡುವು ಮುಗಿದರೂ ಆರೋಪಿಗಳ ಬಂಧನವಾಗಿರಲಿಲ್ಲ. ರಾತ್ರಿ ವೇಳೆಯೂ ಪ್ರತಿಭಟನೆ ಮುಂದುವರಿದು ಬಳಿಕ ಎಸ್ಪಿಯವರು ಆರೋಪಿಯ ಬಂಧನದ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಬಿಡಲಾಗಿತ್ತು.

ಈ ಮಧ್ಯೇ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯವರ ಜೊತೆ ಅನುಚಿತ ವರ್ತನೆಯನ್ನು ಖಂಡಿಸಿ ಸರಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದರು.

ಇದೀಗ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮುಂದುವರೆದು ”ಕೇಂದ್ರ ಸರ್ಕಾರ ದೇಶದಾದ್ಯಂತ ಜನಗಣತಿ ಆರಂಭಿಸುವುದಾಗಿ ಘೋಷಿಸಿದೆ. ಜನಗಣತಿ ಆರಂಭವಾದರೆ ಜುಲೈ ತಿಂಗಳಿನಿಂದ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಲು ಅವಕಾಶ ನೀಡುವುದಿಲ್ಲ. ಪರಿಣಾಮ ಬಡವರ ಅತಿಮುಖ್ಯ ಕೆಲಸಕ್ಕೆ ತೊಡಕುಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಾಕಿ ಇರುವ 1014 ಗ್ರಾಮಗಳಿಗೂ ಇದೇ ವರ್ಷದ ಜೂನ್ ಅಂತ್ಯದೊಳಗೆ ಅಂತಿಮ ಅಧಿಸೂಚನೆ ಹೊರಡಿಸಿ ಜುಲೈ ನಂತರ ಹಕ್ಕುಪತ್ರ ವಿತರಿಸಿ. ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಮಾತಿನಂತೆ ಈ ಕೆಲಸವನ್ನು ಈ ವರ್ಷಾಂತ್ಯದೊಳಗೆ ಮುಗಿಸಿ” ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಮಯದ ಗಡುವು ನಿಗದಿಪಡಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement