Published
6 hours agoon
By
Akkare Newsಉಡುಪಿ : ಜಾತಿ, ಧರ್ಮ ಇವುಗಳೆಲ್ಲಕ್ಕಿಂತ ಮುಖ್ಯವಾದುದು ದೇಶದ ಜನರ ರಕ್ಷಣೆ. ಅದಕ್ಕೆ ಆದ್ಯತೆ ನೀಡಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದರು
ಕಾಂಗ್ರೆಸ್ ಭವನದಲ್ಲಿ ಭಾನುವಾರ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿದರು.
ಪ್ರಮುಖರಾದ ಎಂ.ಎ.ಗಪೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಲ್ಯಾಡಿ ಶಿವರಾಮ್ ಶೆಟ್ಟಿ, ದಿನೇಶ್ ಪುತ್ರನ್, ರಮೇಶ್ ಕಾಂಚನ್, ಹರಿಪ್ರಸಾದ್ ಶೆಟ್ಟಿ, ಗೋಪಿನಾಥ್ ಭಟ್, ನಾಗೇಶ್ ಉದ್ಯಾವರ, ಸುರೇಶ್ ಶೆಟ್ಟಿ ಇದ್ದರು.
ನೀರೆ ಕೃಷ್ಣ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಕೆ. ಅಣ್ಣಯ್ಯ ಸೇರಿಗಾರ್ ನಿರೂಪಿಸಿದರು. ವೆರೋನಿಕ ಕರ್ನೆಲಿಯೊ ವಂದಿಸಿದರು.