Published
1 year agoon
By
Akkare News
ಬೆಳ್ತಂಗಡಿ: ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಇಲ್ಲಸಲ್ಲದ ಸುಳ್ಳಾರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮುವಾದಕ್ಕೆ ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ನಗರ ಪೋಲಿಸ್ ಆಯಕ್ತ ಅನುಪಮ್ ಅಗರವಾಲ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪರವಾಗಿ ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಮನವಿ ಸಲ್ಲಿಸಿದ್ದಾರೆ.