Published
8 hours agoon
By
Akkare Newsರಾಜ್ಯದ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದ್ದು ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ.1.50ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ದಿನಾಂಕ 01-01-2025ರಿಂದ ಅನ್ವಯವಾಗುವಂತೆ ಶೇ.1.50 ತುಟ್ಟಿಭತ್ಯೆಯನ್ನು ಹೆಚ್ಚಿಸಿ ಅನುಮೋದನೆ ನೀಡಿದೆ ಎಂಬುದಾಗಿ ತಿಳಿಸಿದ್ದಾರೆ.
ಇನ್ನು ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.10.75ರಿಂದ 12.25ರಷ್ಟು ಅಂದರೇ 1.50ರಷ್ಟು ಹೆಚ್ಚಿಸಿದೆ. ಇಂತಹ ಸಿಎಂ ಸಿದ್ಧರಾಮಯ್ಯಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ನೌಕರರ ಪರವಾಗಿ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಧನ್ಯವಾದಗಳನ್ನು ತಿಳಿಸಿದ್ದಾರೆ.