Published
16 hours agoon
By
Akkare Newsನವದೆಹಲಿ :ಆಪರೇಷನ್ ಸಿಂಧೂರ್ | ಪಾಕಿಸ್ತಾನದ 9 ಸ್ಥಳಗಳ ಮೇಲೆ ದಾಳಿ: ಭಾರತ ಪ್ರತಿಪಾದನೆ
ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತದಿಂದ ‘ಆಪರೇಷನ್ ಸಿಂಧೂರ್’ ದಾಳಿ ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ. “ಸ್ವಲ್ಪ ಸಮಯದ ಹಿಂದೆ, ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದವು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಯಿತು. ಅಲ್ಲಿಂದಲೆ ಭಾರತದ ವಿರುದ್ಧ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ, ನಿರ್ದೇಶಿಸಲಾಗಿತ್ತು” ಎಂದು ಭಾರತೀಯ ರಕ್ಷಣಾ ಸಚಿವಾಲಯದ ಹೇಳಿಕೆ ತಿಳಿಸಿದೆ.
ಭಯೋತ್ಪಾದಕ ಮೂಲಸೌಕರ್ಯಗಳ ಮೇಲಿನ ಈ “ನಿಖರ ದಾಳಿ”ಗಳಲ್ಲಿ ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ಅದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಯವರ ದಿಟ್ಟ ನಿರ್ಧಾರ ನಿಜವಾಗಿಯೂ ಸ್ವಾಗತಆರ್ಹ,ಭಾರತದ ಸುದ್ದಿಗೆ ಬಂದರೆ ಪಾಕಿಸ್ತಾನಕ್ಕೆ ನಾವು ತಕ್ಕ ಉತ್ತರ ಕೊಡುತ್ತೇವೆ ಎಂಬುದು ಸಾಬಿತು ಆಗಿದೆ ಇದು ಸ್ವಾಗತಅರ್ಹ,
ದಿಟ್ಟ ನಿರ್ಧಾರಕ್ಕೆ ಭಾರತ ಸರಕಾರ ಕ್ಕೆ ಅಭಿನಂದನೆಗಳು ಅಶೋಕ್ ಕುಮಾರ್ ರೈ ತಿಳಿಸಿರುತ್ತಾರೆ.