Published
7 hours agoon
By
Akkare Newsಬೆಂಗಳೂರು : “ಆಪರೇಷನ್ ಸಿಂದೂರ’ ಬೆನ್ನಲ್ಲೇ ಪಾಕಿಸ್ಥಾನದ ಗಡಿ ರಾಜ್ಯಗಳಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಬೇಕಾಗಿದ್ದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.
ಕೇಂದ್ರದ ಸೂಚನೆ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ, ಅಯೋಧ್ಯಾ, ಜೋರ್ದಾ, ಲಕ್ನೋ, ಘಾಜಿಯಾಬಾದ್ಗೆ ತೆರಳುವ ವಿಮಾನಗಳು ಬುಧವಾರ ಬೆಳ ಗ್ಗಿನಿಂದಲೇ ರದ್ದುಗೊಂಡಿದೆ.
ಜತೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪಡೆಗಳು ಅಲರ್ಟ್ ಆಗಿವೆ. ಕೆಲವು ವಾಯುಯಾನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಜಾರಿಯಲ್ಲಿದ್ದು, ಇದು ಸಂಪರ್ಕ ಜಾಲದಲ್ಲಿನ ಕೆಲವು ವಿಮಾನಗಳ ಸೇವೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ನಮ್ಮ ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಮಾನ್ಯ ಸಚಿವರ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆಗಳನ್ನು ನೆರವೇರಿಸಲು ಕ್ರಮ ಕೈಗೊಳ್ಳಲು ಈ ಮೂಲಕ ಆದೇಶಿಸಿದೆ.
ಮಾನ್ಯ ಸಚಿವರ ಸೂಚನೆಯನ್ನು ಕಟ್ಟು ನಿಟ್ಟಾಗಿ ಪಾಲಿಸತಕ್ಕದ್ದು.