Published
6 hours agoon
By
Akkare Newsಕಾರ್ಕಳ: ಸುಹಾಸ್ ಹತ್ಯೆ ಪ್ರಕರಣವನ್ನು ಎನ್‌ಐಎ ಗೆ ವಹಿಸುವಂತೆ ಕರಾವಳಿ ಶಾಸಕರು ಮೇ 9 ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಒತ್ತಾಯಿಸಲಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 100ಕ್ಕೂ ಹೆಚ್ಚು ಜನರು ಭಾಗಿಯಾಗಿ ಷಡ್ಯಂತ್ರ ನಡೆಸಿದ ಗುಮಾನಿ ಇದ್ದು, ಅಂತಾರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣ ಹರಿದಿದೆ. ಮಂಗಳೂರಿನ ಪೊಲೀಸ್ ಅಧಿಕಾರಿಗಳೂ ಇದರಲ್ಲಿ ಶಾಮೀಲಾಗಿರುವ ಆರೋಪವಿದ್ದು, ಹತ್ಯೆಗೆ ಸಹಕರಿಸಿದ ಮಹಿಳೆಯರನ್ನು ಇನ್ನೂ ಬಂಧಿಸಿಲ್ಲ. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಮೂಲಕವೇ ತನಿಖೆ ನಡೆಸಿದಲ್ಲಿ ಮಾತ್ರ ಸತ್ಯ ಬಹಿರಂಗವಾಗಲು ಸಾಧ್ಯ. ಆದರೆ ರಾಜ್ಯ ಸರಕಾರ ಈ ನಿರ್ಣಯ ತೆಗೆದುಕೊಳ್ಳುವ ನಿರೀಕ್ಷೆ ಇಲ್ಲ.
ಹಾಗಾಗಿ ರಾಜ್ಯಪಾಲರನ್ನು ಮಧ್ಯ ಪ್ರವೇಶಿಸುವಂತೆ ಆಗ್ರಹಿಸಲು ಉಭಯ ಜಿಲ್ಲೆಯ ಶಾಸಕರು ಅವರನ್ನು ಬೇಟಿ ಮಾಡುವರು ಎಂದು ಶಾಸಕ ಶಾಸಕ ಸುನಿಲ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.