Published
5 hours agoon
By
Akkare Newsಹೊಸದಿಲ್ಲಿ: ಪಹಲ್ಗಾಮ್ ಉಗ್ರ ದಾಳಿಯ ಪ್ರತೀಕಾರವಾಗಿ ಭಾರತ ಆರಂಭಿಸಿರುವ ಆಪರೇಷನ್ ಸಿಂದೂರ ಮುಂದುವರಿದಿದ್ದು, ಗುರುವಾರ ಸಂಜೆ ಪೆಟ್ಟು ತಿಂದ ಬಳಿಕವೂ ಪಾಕಿಸ್ಥಾನ ಪ್ರತಿದಾಳಿಯ ದುಸ್ಸಾಹಸಕ್ಕೆ ಮುಂದಾಗಿದ್ದು, ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಗೆ ಮುಂದಾಗಿದೆ.
ಜಮ್ಮು, ಪಂಜಾಬ್ ಮತ್ತು ರಾಜಸ್ಥಾನ ಪ್ರದೇಶಗಳಲ್ಲಿ ಪಾಕಿಸ್ಥಾನದ ಕಡೆಯಿಂದ ನಿರಂತರ ಗುಂಡಿನ ದಾಳಿ ನಡೆಯುತ್ತಿದ್ದು, ಭಾರತೀಯ ಸೇನೆಯ ವಾಯು ರಕ್ಷಣ ವ್ಯವಸ್ಥೆಯು ಪಾಕಿಸ್ತಾನದ ಎಫ್ -16 ಯುದ್ಧ ವಿಮಾನ ಮತ್ತು 2 ಜೆಎಫ್ -17 ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿದೆ.
ಸಂಜೆ ಜಮ್ಮುವಿನಲ್ಲಿ ಇದ್ದಕ್ಕಿದ್ದಂತೆ ವಿದ್ಯುತ್ ಕಡಿತವಾಗಿ ಸಂಪೂರ್ಣ ಕತ್ತಲು ಆವರಿಸಿತು. ಇದೇ ವೇಳೆ ಭಾರೀ ಶಬ್ದವೂ ಕೇಳಿದೆ. ತಕ್ಷಣ ಸೈರನ್ಗಳು ಮೊಳಗಲು ಪ್ರಾರಂಭಿಸಿದವು. ಇದರಿಂದ ಜನರು ಗಾಬರಿಯಾಗಿ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಈ ವೇಳೆ ಕತ್ತಲು ತುಂಬಿದ ಆಕಾಶದಲ್ಲಿ ದೊಡ್ಡ ಬೆಳಕು ಕಾಣಿಸಿಕೊಂಡಿದ್ದು, ಪಾಕಿಸ್ತಾನದಿಂದ ಡ್ರೋನ್ ದಾಳಿ ನಡೆದಿದ್ದು, ಆ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಒಂದು ಡ್ರೋನ್ ಜಮ್ಮು ವಿಮಾನ ನಿಲ್ದಾಣಕ್ಕೆ ಅಪ್ಪಳಿಸಿದರೆ, ಪಠಾಣ್‌ಕೋಟ್, ಜಮ್ಮು ನಗರ ಮತ್ತು ಉಧಂಪುರದಲ್ಲಿ ಭಾರತೀಯ ವಾಯು ರಕ್ಷಣಾ ವ್ಯವಸ್ಥೆಗಳು ಮೂರನ್ನು ಹೊಡೆದುರುಳಿಸಿದವು.ಜಮ್ಮು ವಿಶ್ವವಿದ್ಯಾಲಯದ ಬಳಿ ಎರಡು ಡ್ರೋನ್‌ಗಳನ್ನು ವಾಯು ರಕ್ಷಣಾ ಸೇನೆ ಹೊಡೆದುರುಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಾರೀ ಗುಂಡಿನ ಕಾಳಗ ವರದಿಯಾಗಿದೆ.ಅಂತಾರಾಷ್ಟ್ರೀಯ ಗಡಿ ಮತ್ತು ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದಿಂದ ಭಾರೀ ಗುಂಡಿನ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರದ ಉರಿ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಂಡಿದೆ.
ಪಾಕಿಸ್ಥಾನದ ಗಡಿಗೆ ಹೊಂದಿಕೊಂಡಿರುವ ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಂಡಿದೆ. ಗುಂಡಿನ ಶಬ್ದವೂ ಕೇಳಿಬಂದಿದೆ.
ಅಂತಾರಾಷ್ಟ್ರೀಯ ಗಡಿ ಮತ್ತು ನಿಯಂತ್ರಣ ರೇಖೆಯಲ್ಲಿ ಪಾಕಿಸ್ಥಾನದಿಂದ ಭಾರೀ ಫಿರಂಗಿ ಗುಂಡಿನ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರದ ಉರಿ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಂಡಿದೆ. ಪಂಜಾಬ್‌ನ ಜಲಂಧರ್‌ನಲ್ಲಿ ಪಾಕಿಸ್ಥಾನಿ ಡ್ರೋನ್ ತಡೆಯಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಸತ್ವಾರಿ, ಸಾಂಬಾ, ಆರ್‌ಎಸ್ ಪುರ ಮತ್ತು ಅರ್ನಿಯಾ ಕಡೆಗೆ ಬಂದ ಪಾಕಿಸ್ಥಾನದ 8 ಕ್ಷಿಪಣಿಗಳನ್ನು ವಾಯು ರಕ್ಷಣಾ ಘಟಕಗಳು ತಡೆದಿವೆ.