Connect with us

ಇತರ

ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಬಿಗ್ ಶಾಕ್, ಶಾಸಕ ಸ್ಥಾನದಿಂದ ಅನರ್ಹ

Published

on

ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್​​ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರಿಂದ ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ. ಏಳು ವರ್ಷ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹರಗೊಂಡಿದ್ದಾರೆ. ಇದರಿಂದ ಗಂಗಾವತಿ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.

ಬೆಂಗಳೂರು, : ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು. ಇದರಿಂದ ಹೇಗಾದರೂ ಮಾಡಿ ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್​ ಮುಂದೆ ಅಂಗಲಾಚಿ ಬೇಡಿಕೊಂಡಿದ್ದರು. ಆದ್ರೆ, ಕೋರ್ಟ್​ ರೆಡ್ಡಿ ಮನವಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

 

 

ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಕೋರ್ಟ್​, ಜನಾರ್ದನ ರೆಡ್ಡಿ ಅನುಮಾತಿ ಕೊಟ್ಟಿರಲಿಲ್ಲ. ಹೀಗಾಗಿ ರೆಡ್ಡಿ ಕೆಆರ್​ಎಸ್​ ಪಕ್ಷವನ್ನು ಕಟ್ಟಿ ಅದರಿಂದಲೇ ​ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ತಮ್ಮ ಸಮೀಪ ಸ್ಪರ್ಧಿ ಕಾಂಗ್ರೆಸ್​ನ ಇಕ್ಬಾಲ್​ ಅನ್ಸಾರಿ ಅವರನ್ನು ಸೋಲಿಸಿ ಮತ್ತೆ ರಾಜಕೀಯ ಪುನರ್ಜನ್ಮ ಪಡೆದುಕೊಂಡಿದ್ದರು. ಆದರೆ, ಇದೀಗ ರೆಡ್ಡಿ ತಮ್ಮ ಶಾಸಕ ಸ್ಥಾನ ಕಳೆದುಕೊಂಡಿದ್ದರಿಂದ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version