Published
10 months agoon
By
Akkare News
‘ಆಪರೇಷನ್ ಸಿಂದೂರ’ದ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಿ ಇಂದು ರಾಜ್ಯ ಕಾಂಗ್ರೆಸ್ ವತಿಯಿಂದ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಇಂದು ಬೆಳಗ್ಗೆ 9:30ಕ್ಕೆ ಆರಂಭವಾಗುವ ಈ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ವಹಿಸಲಿದ್ದು, ಬೆಂಗಳೂರಿನ ಕೆ.ಆರ್.ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಇರುವ ಮಿನ್ಸ್ಕ್ಸ್ಕ್ವೇರ್ವರೆಗೆ ಯಾತ್ರೆ ನಡೆಯಲಿದೆ.

ಈ ಯಾತ್ರೆಯಲ್ಲಿ ಸರ್ಕಾರದ ಎಲ್ಲಾ ಸಚಿವರು, ಶಾಸಕರು, ಕೆಪಿಸಿಸಿ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಯುವ ಕಾಂಗ್ರೆಸ್ ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಪಕ್ಷ ಈಗಾಗಲೇ ಸೂಚನೆ ನೀಡಿದೆ.

‘ದೇಶಪ್ರೇಮ ಮೆರೆಯೋಣ, ಐಕ್ಯತೆ ಸಾರೋಣ’ ಎಂಬ ಘೋಷವಾಕ್ಯದಡಿ ನಡೆಯುವ ಈ ಯಾತ್ರೆಯಲ್ಲಿ ಸರ್ಕಾರಿ, ಖಾಸಗಿ ನೌಕರರು, ಚಿತ್ರರಂಗ, ಎಲ್ಲಾ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಲಾಗಿದೆ. ಯಾತ್ರೆಯಲ್ಲಿ ಭಾರದ ಧ್ವಜ ಬಳಸಲು ಮಾತ್ರ ಅವಕಾಶವಿದೆ.








