Published
4 hours agoon
By
Akkare Newsಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಇತ್ತೀಚಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಸುದ್ದಿ ಇನ್ನು ಅಭಿಮಾನಿಗಳ ಮನದಲ್ಲಿ ಹಸಿರಾಗಿರುವಾಗಲೇ, ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಈ ಸುದ್ದಿ ಅಭಿಮಾನಿಗಳಿಗೆ ತೀವ್ರ ಆಘಾತವನ್ನು ಉಂಟು ಮಾಡಿದೆ. ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸಹ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ.
ಇತ್ತೀಚಿಗೆ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಿವರತ್ತಿಯ ನಿರ್ಧಾರವನ್ನು ಪ್ರಕಟಿಸಿದ್ದರು. ಅಲ್ಲದೆ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದರು. ಐಪಿಎಲ್ ನಡೆಯುತ್ತಿರುವಾಗಲೇ ರೋಹಿತ್ ಶರ್ಮಾ ಅವರ ಈ ನಿರ್ಧಾರ ನಿಜಕ್ಕೂ ಅಭಿಮಾನಿಗಳಿಗೆ ಬೇಸರ ತರಿಸಿತ್ತು. ಭಾರತ ಇಂಗ್ಲೆಂಡ್ ಪ್ರವಾಸವನ್ನು ಆರಂಭಿಸುವ ಮುನ್ನ ರೋಹಿತ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದರು. ಈಗ ವಿರಾಟ್ ಸಹ ಇದೇ ಹಾದಿ ತುಳಿದಂತೆ ಕಾಣುತ್ತಿದೆ.