Published
13 hours agoon
By
Akkare Newsರಾಜ್ಯದ ಹಲವು ಕಡೆ ಮಳೆಯ ಸಿಂಚನ ಆದರೂ ಕೂಡ ಬೇಸಿಗೆ ದಗೆಯಿಂದ ಜನರು ತತ್ತರಿಸುತ್ತಿದ್ದಾರೆ. ಹೀಗಾಗಿ ಮುಂಗಾರು ಮಳೆ ಯಾವಾಗ ಎಂದು ಜನರು, ರೈತರು ಎದುರು ನೋಡುತ್ತಿದ್ದಾರೆ. ಇದರ ಬೆನ್ನಲ್ಲೇ ಮುಂದಿನ 5 ದಿನ ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದ್ದು, ಈ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೆ ಕರಾವಳಿ ಕರ್ನಾಟಕದ ಭಾಗಗಳು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.