Connect with us

ಇತರ

ವಾಹನಗಳಲ್ಲಿ ಟಿಂಟೆಡ್ ಗ್ಲಾಸ್ ವಿರುದ್ದ ಮಂಗಳೂರು ಪೊಲೀಸರ ಕಾರ್ಯಾಚರಣೆ – 504 ಕೇಸ್ ದಾಖಲು

Published

on

ಮಂಗಳೂರು ಮೇ 12: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ವತಿಯಿಂದ ವಿವಿಧ ಕಡೆಗಳಲ್ಲಿ ವಿಶೇಷ ಚೆಕ್‌ಪೋಸ್ಟ್ಗಳನ್ನು ತೆರೆದು ವಾಹನಗಳ ತಪಾಸಣೆ ಕಾರ್ಯವನ್ನು ವಾಹನಗಳ ದಾಖಲಾತಿಗಳನ್ನು ಪರಿಶೀಲನೆಯನ್ನು ನಡೆಸಲಾಗುತ್ತಿದೆ. ನಗರದ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ನಗರದಲ್ಲಿ ಅಥವಾ ಟಿಂಟೆಡ್ ಗ್ಲಾಸ್‌ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಪತ್ತೆ ಹಚ್ಚುವ ವಿಶೇಷ ಕಾರ್ಯಚರಣೆಯನ್ನು ನಡೆಸಿ, ಕಳೆದ 10 ದಿನಗಳಲ್ಲಿ ವರೆಗೆ ಒಟ್ಟು 504 ಕಾರುಗಳ ವಿರುದ್ದ ಪ್ರಕರಣವನ್ನು ದಾಖಲಿಸಿ, ವಿಧಿಸಿರುತ್ತಾರೆ.

ಅಲ್ಲದೇ ವಾಹನಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ವಾಹನ ಚಾಲಕರಿಂದ ತೆಗೆಸಿ ಸೂಕ್ತ ತಿಳುವಳಿಕೆಯನ್ನು ನೀಡಲಾಗಿರುತ್ತದೆ.
ಸದ್ರಿ ವಿಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರೆಯಲಿದ್ದು, ಸಾರ್ವಜನಿಕರು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್‌ಗಳನ್ನು ಅಳವಡಿಸದಂತೆ ತಿಳಿಸಲಾಗಿದೆ.

 

 

ಸಾರ್ವಜನಿಕರಿಗೆ ವಿಶೇಷ ಸೂಚನೆ:-
1. ಸರ್ವೋಚ್ಚ ನ್ಯಾಯಾಲಯ ತೀರ್ಪಿನಲ್ಲಿ ವಾಹನಗಳಲ್ಲಿ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲಂ ಆಳವಡಿಸುವವರ ವಿರುದ್ದ ಕ್ರಮ ಕೈಗೊಳ್ಳಲು ಮತು ಸದ್ರಿ ಟಿಂಟೆಡ್ ಗ್ಲಾಸ್‌ಗಳನ್ನು ತೆರವುಗೊಳಿಸುವಂತೆ ಆದೇಶಿಸಿರುತ್ತದೆ.
2. ವಾಹನಗಳ ಗಾಜುಗಳಿಗೆ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಇತರೆ ವಸ್ತುಗಳನ್ನು ಅಂಟಿಸುತ್ತಿಲ್ಲ.
3. ಸಾರ್ವಜನಿಕರು ತಮ್ಮ ವಾಹನಗಳಿಗೆ ಅಳವಡಿಸಲಾಗಿರುವ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಇತರೆ ವಸ್ತುಗಳನ್ನು ಸ್ವತಃ ತೆಗೆದು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವುದು.
4. ಮೇಲ್ಕಂಡ ನಿಯಮ ಉಲ್ಲಂಘನೆ ಮಾಡುವವರ ವಿರುದ್ದ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆಯನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸರು ತಿಳಿಸಿದ್ದಾರೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement