Published
5 hours agoon
By
Akkare Newsರಾಜಧಾನಿ ಬೆಂಗಳೂರಿನ ಆಡಳಿತದ ಹೊಣೆ ಹೊತ್ತಿದ್ದ ʻಬಿಬಿಎಂಪಿʼ ಹೆಸರು ಇತಿಹಾಸ ಪುಟ ಸೇರಲಿದ್ದು, ನಾಳೆಯಿಂದ ಗ್ರೇಟರ್ ಬೆಂಗಳೂರು ಆಡಳಿತ ಜಾರಿಯಾಗಲಿದೆ.
ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯು ʻಗ್ರೇಟರ್ ಬೆಂಗಳೂರು ಪ್ರಾಧಿಕಾರʼ ಆಗಿ ಬದಲಾಗಲಿದೆ. ಈ ಕುರಿತು ರಾಜ್ಯ ಸರ್ಕಾರ ಇಂದು ಅಧಿಕೃತ ಅಧಿಸೂಚನೆ ಹೊರಡಿಸಿದೆ.
ರಾಜ್ಯದ ಅತಿದೊಡ್ಡ ಸ್ಥಳೀಯ ಸರ್ಕಾರ ಆಗಲಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುತ್ತಾರೆ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ.
ಇದರೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಲ್ಲಿ ಸುಗಮ ಆಡಳಿತ ತರುವ ದೃಷ್ಟಿಯಿಂದ ಗರಿಷ್ಠ 7 ಪಾಲಿಕೆ ರಚನೆಗೆ ಪ್ರಸ್ತಾಪ ಮಾಡಲಾಗಿದೆ. ಈ ಕಾಯ್ದೆಗೆ ನಿಯಮಾವಳಿ ರೂಪಿಸಿದ ಬಳಿಕ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಜೊತೆಗೆ ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ಜಿಬಿಎ ಮುಖ್ಯ ಆಯುಕ್ತರು ಎಂದು ಹೆಸರು ಬದಲಾವಣೆ ಮಾಡಲಾಗಿದೆ. ಜೊತೆಗೆ ಹೊಸ ಆಡಳಿತಾಧಿಕಾರಿಯನ್ನೂ ನೇಮಕ ಮಾಡಲಾಗುತ್ತದೆ..