Published
12 hours agoon
By
Akkare Newsಬಂಟ್ವಾಳ : ಮೃತಪಟ್ಟ ತನ್ನ ಗಂಡನ ಮರಣ ಉಪದಾನ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಒಡ್ಡಿ ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ದೂರುದಾರೆ ಮಹಿಳೆಯ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ನೊಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುತ್ತಾರೆ. ತದ ನಂತರ ಅವರ ಗಂಡ ಜೂನ್ 2024 ರಂದು ಮರಣ ಹೊಂದಿರುತ್ತಾರೆ.
ಬಳಿಕ ಮಹಿಳೆ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಶ್ರೀ ಭಾಸ್ಕರ್ ರವರ ಬಳಿ ಅವರ ಗಂಡನ ಮರಣ ಉಪದಾನದ ಬಗ್ಗೆ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿರುವುದಿಲ್ಲ. ಸ್ವಲ್ಪ ಸಮಯದ ನಂತರ ದೂರದಾರೆ ಮಹಿಳೆಯ ಖಾತೆಗೆ ಗಂಡನ ಮರಣ ಉಪದಾನವನ್ನು ಜಮೆ ಮಾಡಿಕೊಟ್ಟಿರುವ ಪ್ರತಿಫಲವಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ರವರು ರೂ 5000/- ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್.ರವರ ರೂ 5000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.