Published
10 hours agoon
By
Akkare Newsಶ್ರೀನಗರ: ‘ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ, ಈಗ ನಡೆದಿದ್ದು ಟ್ರೇಲರ್ ಅಷ್ಟೇ. ಸರಿಯಾದ ಸಮಯ ಬಂದಾಗ ಜಗತ್ತಿಗೆ ಸಿನಿಮಾವನ್ನು ತೋರಿಸುತ್ತೇವೆ’ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
‘ಗುರುವಾರವಷ್ಟೇ ನಾನು ಶ್ರೀನಗರದಲ್ಲಿ ನಮ್ಮ ಧೈರ್ಯಶಾಲಿ ಸೇನಾ ಸಿಬ್ಬಂದಿಯನ್ನು ಭೇಟಿಯಾದೆ. ಇಂದು ನಾನು ವಾಯುಪಡೆಯನ್ನು ಭೇಟಿಯಾಗಿದ್ದೇನೆ. ನೀವು ಭಾರತದ ಗಡಿಗಳಲ್ಲಿ ಯಾವಾಗಲೂ ಕಾರ್ಯಪ್ರವೃತ್ತರಾಗಿರುವುದರಿಂದ ನಾವೆಲ್ಲರೂ ಸುರಕ್ಷಿತವಾಗಿದ್ದೇವೆ ಎನ್ನುವ ಭರವಸೆ ನನಗಿದೆ. ಬ್ರಹ್ಮೋಸ್ ಕ್ಷಿಪಣಿಯ ಶಕ್ತಿಯನ್ನು ಪಾಕಿಸ್ತಾನ ಕೂಡ ಒಪ್ಪಿಕೊಂಡಿದೆ. ಕ್ಷಿಪಣಿಗಳ ಶಬ್ದದಲ್ಲಿ ನಿಮ್ಮೆಲ್ಲರ ಶೌರ್ಯ ಹಾಗೂ ಭಾರತೀಯ ಮೂರು ಪಡೆಗಳ ಶೌರ್ಯ ಪ್ರತಿಧ್ವನಿಸುತ್ತಿತ್ತು’ ಎಂದರು.
‘ಭಿಕ್ಷೆ ಬೇಡುತ್ತಿದ್ದ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯು ವಿಸ್ತೃತ ನಿಧಿ ಸೌಲಭ್ಯದಡಿಯಲ್ಲಿ ಎರಡು ಕಂತುಗಳಲ್ಲಿ 2.1 ಬಿಲಿಯನ್ ಡಾಲರ್‌ಗಳನ್ನು ವಿತರಿಸಿದೆ. ಇದನ್ನು ಪಾಕಿಸ್ತಾನ ಪರೋಕ್ಷವಾಗಿ ಭಯೋತ್ಪಾದನೆಗೆ ನೀಡುತ್ತಿದೆ. ಪಾಕ್ ಹಣವನ್ನು ಭಯೋತ್ಪಾದಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಬಳಕೆ ಮಾಡುತ್ತಿದೆ. ಮೃತ ಭಯೋತ್ಪಾದಕರ ಕುಟುಂಬಗಳಿಗೆ ಈ ಹಣವನ್ನು ಪಾಕ್ ಪರಿಹಾರವಾಗಿ ನೀಡುತ್ತಿದೆ. ಈಗಾಗಲೇ ಮೋಸ್ಟ್ ವಾಂಟೆಡ್ ಉಗ್ರ ಮಸೂದ್‌ಗೆ ಪಾಕಿಸ್ತಾನ 14 ಕೋಟಿ ರೂ. ಪರಿಹಾರ ನೀಡಿದೆ’ ಎಂದು ತಿಳಿಸಿದರು.