Published
8 hours agoon
By
Akkare Newsಬೆಂಗಳೂರು: ರಾಜ್ಯಾದ್ಯಂತ ಶಾಲೆ ಪುನರ್ ಆರಂಭಗೊಳ್ಳಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಶಾಲೆಗೆ ತೆರಳಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾಹಿತಿ ನೀಡಿದ್ದಾರೆ.
.
ಶನಿವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 29ರಿಂದ ಶಾಲೆಗಳು ಪುನರ್ ಆರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಶಾಲೆ ಆರಂಭವಾಗುವ ದಿನವೇ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯ ವಿತರಣೆ ಕೂಡ ಮಾಡಲಾಗುವುದು. ಶೂ ಮತ್ತು ಸಾಕ್ಸ್ ಹಂತ ಹಂತವಾಗಿ ವಿತರಿಸಲಾಗುವುದು ಎಂದು ಅವರು ತಿಳಿಸಿದರು.
ಸಿಎಂ ಸಿದ್ದರಾಮಯ್ಯನವರ ಸೂಚನೆ ಹಿನ್ನೆಲೆ ಮಕ್ಕಳಿಗೆ ಶಾಲೆಯಲ್ಲಿ ನೈತಿಕ ಶಿಕ್ಷಣ ನೀಡಲು ಉದ್ದೇಶಿಸಿದ್ದು, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಲ್ಲಿ ಮಾನವೀಯ ಮೌಲ್ಯಯುತವಾದ ಶಿಕ್ಷಣವನ್ನು ನೀತಿ ವಿಜ್ಞಾನ ಮೂಲಕ ಬೋಧಿಸಲಾಗುವುದು ಎಂದು ಅವರು ತಿಳಿಸಿದರು.