Published
4 hours agoon
By
Akkare Newsಸುಳ್ಯ: ಸುಳ್ಯ ತಾಲೂಕಿನ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭಾಗಿಯಾಗಿ ಹರಕೆ ತೀರಿಸಿಕೊಂಡರು.
.
ಲೋಕಸಭೆ ಚುನಾವಣೆಗೂ ಮುನ್ನ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ ಹರಕೆ ಕಟ್ಟಿಕೊಳ್ಳಲಾಗಿತ್ತು. ಅದನ್ನು ಈಗ ತೀರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ದೈವ ನೀಡಿರುವ ಪ್ರಸಾದವನ್ನು ತಲುಪಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಸುಳ್ಯದ ಜಯನಗರದಲ್ಲಿರುವ ಶ್ರೀನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಶ್ರೀಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ವಿಶೇಷ ಹರಕೆಯ ಹಿನ್ನೆಲೆಯಲ್ಲಿ ಶ್ರೀಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳ ತಂಬಿಲ ಸೇವೆ ಕಾರ್ಯಕ್ರಮ ನಡೆಯಿತು.
ಈ ವೇಳೆ ಸಂಸದ ಬ್ರಿಜೇಶ್ ಚೌಟ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿ ಹಲವು ಮಂದಿ ಬಿಜೆಪಿ ನಾಯಕರು ಉಪಸ್ಥಿತರಿದ್ದರು.