Connect with us

ಇತ್ತೀಚಿನ ಸುದ್ದಿಗಳು

ಭಾರೀ ಮಳೆಗೆ ಕರಾವಳಿ ತತ್ತರ: ರೆಡ್‌ ಅಲರ್ಟ್‌ ಘೋಷಣೆ

Published

on

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ 20 ರಿಂದ ಮೇ 23ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಇರಲಿದೆ.

ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.

ಮುಂಜಾಗೃತಾ ಕ್ರಮದ ಬಗ್ಗೆ ಸೂಚನೆ ನೀಡಿರುವ ಪ್ರಾಧಿಕಾರವೂ, ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಾರು ಜಾಗೃತೆ ವಹಿಸಬೇಕು. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಜಿಲ್ಲಾಡಳಿತದಿಂದ ನೇಮಕ ಮಾಡಲಾದ ಇನ್ಸಿಡೆಂಟ್ ಕಮಾಂಡರ್‌ಗಳು ಜಾಗೃತ ರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕಾ ದೋಣಿಗಳು ಕೂಡಲೇ ದಡ ಸೇರುವಂತೆ ಹಾಗೂ ಪ್ರವಾಸಿಗರು, ಸಾರ್ವಜನಿಕರು ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆದು ಸನ್ನದ್ಧ ಸ್ಥಿತಿಯಲ್ಲಿರಲು ನಿರ್ದೇಶನ ನೀಡಲಾಗಿದೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಯಾವುದೇ ಸಮಸ್ಯೆಗಳಿಗೆ ಉಚಿತ ಸಹಾಯವಾಣಿ 1077/0824- 2442590ಗೆ ಸಂಪರ್ಕಿಸಬಹುದು.
ಮಂಗಳೂರು ಮನಪಾ- 0824- 2220306/2220319
ಮಂಗಳೂರು ತಾಲೂಕು- 0824- 2220587
ಉಳ್ಳಾಲ- 0824- 22204424
ಬಂಟ್ವಾಳ- 7337669102
ಪುತ್ತೂರು- 08251-230349
ಬೆಳ್ತಂಗಡಿ- 08257-231231
ಮೂಡಬಿದಿರೆ- 08258-238100
ಕಡಬ- 08251-260435
ಮುಲ್ಕಿ- 0824- 22944496

 

Continue Reading
Click to comment

Leave a Reply

Your email address will not be published. Required fields are marked *

Advertisement