Connect with us

ಇತ್ತೀಚಿನ ಸುದ್ದಿಗಳು

ಕನ್ನಡ ಮಾತನಾಡಲ್ಲ ಎಂದು ದರ್ಪ ತೋರಿದ್ದ ಎಸ್‌ಬಿಐ ಬ್ಯಾಂಕ್‌ ಮ್ಯಾನೇಜರ್‌ ಟ್ರಾನ್ಸ್‌ಫರ್ ‌

Published

on

ಬೆಂಗಳೂರಿನ ಹೊರವಲಯ ಅನೆಕಲ್‌ ತಾಲ್ಲೂಕಿನ ಸೂರ್ಯನಗರದಲ್ಲಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯ ಮ್ಯಾನೇಜರ್‌ ದುರ್ವತನೆಗೆ ಇದೀಗ ಬ್ಯಾಂಕ್‌ ಆಡಳಿತ ಮಂಡಳಿ ಶಿಕ್ಷೆ ನೀಡಿದೆ. ನಾನು ಕನ್ನಡ ಮಾತನಾಡೊಲ್ಲ, ನೀವೇ ಹಿಂದೆ ಮಾತನಾಡಿ ಇಲ್ಲದಿದ್ದರೆ ಅದೇನು ಮಾಡ್ಕೋತಿರೋ ಮಾಡಿಕೊಳ್ಳಿ ಎಂದು ಹಿಂದಿ ದರ್ಪವನ್ನು ಮೆರೆದ ಎಸ್‌ಬಿಐ ಬ್ಯಾಂಕ್‌ ಮ್ಯಾನೇಜರನ್ನು ವರ್ಗಾವಣೆ ಮಾಡಲಾಗಿದೆ. ಈ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.

ಕನ್ನಡಿಗರ ಹೋರಾಟಕ್ಕೆ ಹೆದರಿ ಮಂಗಳವಾರ ರಾತ್ರಿಯೇ ಮ್ಯಾನೇಜರನ್ನು ಟ್ರಾನ್ಸ್‌ಫರ್‌ ಮಾಡಲಾಗಿದೆ. ಮಹಿಳಾ ಮ್ಯಾನೇಜರನ್ನು ಹೊರ ರಾಜ್ಯಕ್ಕೆ ವರ್ಗಾವಣೆಗೊಳಿಸುವಂತೆ ಆದೇಶ ನೀಡಲಾಗಿದೆ ಎಂದು ಎಸ್‌ಬಿಐ ಮೂಲಗಳು ತಿಳಿಸಿರುವ ಕುರಿತು ವರದಿಯಾಗಿದೆ.

ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ಎಸ್‌ಬಿಐ ಶಾಖಾ ವ್ಯವಸ್ಥಾಪಕರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತನಾಡಲು ನಿರಾಕರಿಸಿ ನಾಗರಿಕರನ್ನು ಕಡೆಗಣಿಸುತ್ತಿರುವುದು ತೀವ್ರವಾಗಿ ಖಂಡನೀಯ. ಅಧಿಕಾರಿಯನ್ನು ವರ್ಗಾವಣೆ ಮಾಡುವಲ್ಲಿ ಎಸ್‌ಬಿಐನ ತ್ವರಿತ ಕ್ರಮವನ್ನು ನಾವು ಪ್ರಶಂಸಿಸುತ್ತೇವೆ. ಈ ವಿಷಯವನ್ನು ಈಗ ಮುಕ್ತಾಯಗೊಳಿಸಲಾಗಿದೆ ಎಂದು ಪರಿಗಣಿಸಬಹುದು. ಆದಾಗ್ಯೂ, ಅಂತಹ ಘಟನೆಗಳು ಮರುಕಳಿಸಬಾರದು. ಎಲ್ಲಾ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಘನತೆಯಿಂದ ನಡೆಸಿಕೊಳ್ಳಬೇಕು ಮತ್ತು ಸ್ಥಳೀಯ ಭಾಷೆಯಲ್ಲಿ ಮಾತನಾಡಲು ಎಲ್ಲ ಪ್ರಯತ್ನಗಳನ್ನು ಮಾಡಬೇಕು. ಭಾರತದಾದ್ಯಂತ ಎಲ್ಲಾ ಬ್ಯಾಂಕ್ ಸಿಬ್ಬಂದಿಗೆ ಸಾಂಸ್ಕೃತಿಕ ಮತ್ತು ಭಾಷಾ ಸಂವೇದನಾ ತರಬೇತಿಯನ್ನು ಕಡ್ಡಾಯಗೊಳಿಸಬೇಕೆಂದು ನಾನು @FinMinIndia ಮತ್ತು ಹಣಕಾಸು ಸೇವೆಗಳ ಇಲಾಖೆಯನ್ನು ಒತ್ತಾಯಿಸುತ್ತೇನೆ. ಸ್ಥಳೀಯ ಭಾಷೆಯನ್ನು ಗೌರವಿಸುವುದು ಎಂದರೆ ಜನರನ್ನು ಗೌರವಿಸುವುದು ಎಂದು ಸಿಎಂ ಬರೆದಿದ್ದಾರೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement