Published
9 hours agoon
By
Akkare Newsಮೈಸೂರಿನಲ್ಲಿ ಪ್ರಪ್ರಥಮ ಬಾರಿಗೆ ಕರಾವಳಿಯ ಗಂಡು ಕಲೆ ಯಕ್ಷಗಾನ ಬಯಲಾಟ ಬಹಳ ಅದ್ದೂರಿಯಾಗಿ ನಡೆಯಲಿದೆ. ಮೇ 22 ನೇ ಗುರುವಾರ ಸಂಜೆ 6 ಗಂಟೆಗೆ ಗಾನ ಗಂಧರ್ವ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.
ವಿದ್ಯುತ್ ದೀಪಗಳಿಂದ ಅಲಂಕೃತವಾದ ಭವ್ಯ ರಂಗಮಂಟಪದಲ್ಲಿ ಮಹಿಷಾಸುರನ ಅಬ್ಬರದೊಂದಿಗೆ ಬಹಳ ವಿಜೃಂಭಣೆಯಿಂದ ಅರಮನೆ ನಗರ ಮೈಸೂರಿನ ಹೊರವಲಯದ ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾದ ದಿ ರಿವ್ಯೂವ್ ಆಸ್ಪತ್ರೆ ಬಳಿಯ ಎಸ್.ಎಲ್.ವಿ ಬುಕ್ಸ್ ಇಂಡಿಯಾದ ಪ್ಲಾಟ್ ನಂಬರ್ ಎಚ್. 3 ನಲ್ಲಿ ಯಕ್ಷಗಾನ ಬಯಲಾಟ ನಡೆಯಲಿದೆ. ಕಾರ್ಯಕ್ರಮದ ನಂತರ ಭೋಜನದ (ಅನ್ನ ಸಂತರ್ಪಣೆ) ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮತ್ತು ಕರಾವಳಿ ಜಿಲ್ಲಾ ಸಂಘಗಳ ಒಕ್ಕೂಟ (ರಿ), ಮೈಸೂರು ಸೇರಿದಂತೆ ಗಣ್ಯಾತಿ ಗಣ್ಯರು ಭಾಗವಹಿಸಲಿದ್ದಾರೆ.
ಎಸ್.ಎಲ್ ವಿ ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಮಾಲೀಕರಾದ ಉದ್ಯಮಿ ದಿವಾಕರ ದಾಸ್ ನೇರ್ಲಾಜೆಯವರ ಪ್ರಾಯೋಜಕತ್ವದಲ್ಲಿ ನಡೆಯುವ ಈ ಯಕ್ಷಗಾನ ಬಯಲಾಟದಲ್ಲಿ ಎಲ್ಲಾ ಕಲಾಭಿಮಾನಿಗಳು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.