Published
8 hours agoon
By
Akkare Newsನೆಲ್ಯಾಡಿ : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಗ್ರಾಮದ ಕೊಡ್ಯಕಲ್ ಎಂಬಲ್ಲಿ ಮೇ 21 ರಂದು ಸಂಜೆ 4.30ಕ್ಕೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಅನಿಲ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಕೊಡ್ಯಕಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆ ಇಲ್ಲದೇ ಇರುವುದರಿಂದ ಹೆದ್ದಾರಿಯ ಒಂದು ಬದಿಯಲ್ಲಿ ವಾಹನಗಳು ಓಡಾಟ ಮಾಡುತ್ತಿವೆ.