Connect with us

ಇತರ

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಎಂ ಎ ಸಲೀಂ ನೇಮಕ

Published

on

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್​ ಅಧಿಕಾರಿ ಡಾ. ಎಂ ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್​ ಅವರು ನೂತನ ಡಿಜಿಪಿ ಡಾ. ಎಂ. ಎ ಸಲೀಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಐಪಿಎಸ್​ ಅಧಿಕಾರಿ, ಕರ್ನಾಟಕದ ಪೊಲೀಸ್​ ಮಹಾನಿರ್ದೇಶಕರಾಗಿರುವ ಡಾ. ಅಲೋಕ ಮೋಹನ್​ ಅವರು ಬುಧವಾರವೇ ಸೇವೆಯಿಂದ ನಿವೃತ್ತರಾಗಿದ್ದಾರೆ.

ಡಾ. ಎಂ. ಎ ಸಲೀಂ ಅವರು 1966ರ ಜೂನ್​ 25 ರಂದು ಬೆಂಗಳೂರಿನ ಚಿಕ್ಕಬಾಣವರದಲ್ಲಿ ಜನಿಸಿದರು. 1998ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್​ ಮ್ಯಾನೇಜ್ಮೆಂಟ್​ ವಿಷಯದಲ್ಲಿ ಡಾಕ್ಟರೇಟ್​ ಪದವಿಯನ್ನು ಪಡೆದುಕೊಂಡಿದ್ದಾರೆ.

ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್​ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್​ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು.

 

 

Continue Reading
Click to comment

Leave a Reply

Your email address will not be published. Required fields are marked *

Advertisement