Published
8 hours agoon
By
Akkare Newsಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್ ಅವರು ನೂತನ ಡಿಜಿಪಿ ಡಾ. ಎಂ. ಎ ಸಲೀಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಐಪಿಎಸ್ ಅಧಿಕಾರಿ, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿರುವ ಡಾ. ಅಲೋಕ ಮೋಹನ್ ಅವರು ಬುಧವಾರವೇ ಸೇವೆಯಿಂದ ನಿವೃತ್ತರಾಗಿದ್ದಾರೆ.
ಡಾ. ಎಂ. ಎ ಸಲೀಂ ಅವರು 1966ರ ಜೂನ್ 25 ರಂದು ಬೆಂಗಳೂರಿನ ಚಿಕ್ಕಬಾಣವರದಲ್ಲಿ ಜನಿಸಿದರು. 1998ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು.