Published
6 hours agoon
By
Akkare Newsವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ದಿಲ್ಲಿ ಕ್ಯಾಪಿಟಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 59 ರನ್ಗಳ ಭರ್ಜರಿ ಗೆಲುವು ಸಾಧಿಸಿ, 16 ಅಂಕದೊಂದಿಗೆ 4ನೇ ತಂಡವಾಗಿ ಪ್ಲೇ ಆಫ್ಗೆ ಪ್ರವೇಶಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಮುಂಬೈ ಆರಂಭದಲ್ಲಿ ಪ್ರಮುಖ ವಿಕೆಟ್ ಕಳೆದುಕೊಂಡರೂ ಸೂರ್ಯ ಅವರ ಸ್ಫೋಟಕ ಬ್ಯಾಟಿಂಗ್ಗೆ 180 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ದಿಲ್ಲಿ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡು 18.2 ಓವರ್ನಲ್ಲಿ 121 ರನ್ಗೆ ಆಲೌಟ್ ಆಗಿದೆ. ಅತ್ತ ದಿಲ್ಲಿಯ ಪ್ಲೇ ಆಫ್ ಪ್ರವೇಶದ ಕನಸು ಭಗ್ನಗೊಂಡಿದೆ.