Published
5 hours agoon
By
Akkare Newsಮೈಸೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಶುರುವಾದ ಹಿನ್ನೆಲೆಯಲ್ಲಿ ಮುಖ್ಯಮತ್ರಿ ಸಿದ್ದರಾಮಯ್ಯ ಇಂದು ತಮ್ಮ ಮನೆಯಿಂದ ಹೊರ ಬರುವಾಗ ಮಾಸ್ಕ್ ಧರಿಸಿಕೊಂಡು ಬಂದರು. ಈ ವೇಳೆ, ತಮ್ಮನ್ನು ನೋಡಲು ಬಂದ ಜನರಿಂದ ಮಾಸ್ಕ್ ಧರಿಸಿಯೇ ಅಹವಾಲು ಸ್ವೀಕರಿಸಿದರು.
ಮೈಸೂರು ಪ್ರವಾಸದಲ್ಲಿರುವ ಸಿಎಂ, ಇಂದು ತಮ್ಮ ಎರಡೇ ದಿನದ ಕಾರ್ಯಕ್ರಮಗಳಲ್ಲಿ ಎರಡು ಕಾರ್ಯಕ್ರಮಳಲ್ಲಿ ಭಾಗಿಯಾಲಿದ್ದು, ಮಧ್ಯಾಹ್ನದ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಬೆಂಗಳೂರಿಗೆ ವಾಪಸ್ ಅಗಲಿದ್ದಾರೆ.
ಹಿನಕಲ್ನಲ್ಲಿ 9 ಇಂದಿರಾ ಕ್ಯಾಂಟೀನ್ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್ನ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸಲಾಗುತ್ತದೆ ಎಂದು ಭರವಸೆ ನೀಡಿದರು.