Published
3 hours agoon
By
Akkare Newsಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾರಂದಕುಕ್ಕು ಅಂಗನವಾಡಿಯಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ 22/5/25 ರಂದು ನಡೆಯಿತು. ಪೋಷಕರು ಅಂಗನವಾಡಿಗೆ ಸೀಲಿಂಗ್ ಫ್ಯಾನನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಧನ್ಯ, ಅಂಗನವಾಡಿ ಕಾರ್ಯಕರ್ತೆ ವೇದಾವತಿ ಶೆಟ್ಟಿ, ಸಹಾಯಕಿ ಮೇಘನ ಮತ್ತು ಪೋಷಕರು ಉಪಸ್ಥಿತರಿದ್ದರು.