Connect with us

ಇತರ

ಬಂಟ್ವಾಳ ರಹಿಮಾನ್ ಹತ್ಯೆ ಪ್ರಕರಣ:15 ಮಂದಿ ವಿರುದ್ಧ ಪ್ರಕರಣ ದಾಖಲು

Published

on

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ‌ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ‌ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೀಪಕ್ ಮತ್ತು ಸುಮಿತ್ ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಅಬ್ದುಲ್ ರಹಿಮಾನ್ ಮತ್ತು ಕಂದರ್ ಶಾಫಿ ಅವರು ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುವ ಸಮಯ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳೊಂದಿಗೆ ಯದ್ವಾ- ತದ್ಬಾ ತಿವಿದು, ಕಡಿದರು, ಆಗ ಪಕ್ಕದಲ್ಲಿದ್ದ ನಾನು ತಡೆಯಲು ಹೋದಾಗ ಚೂರಿಯಿಂದ, ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರ್ ನಿಂದ ಕಡಿದಿದ್ದಾರೆ. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದರ್ ಶಾಫಿ ಮಾಹಿತಿ ನೀಡಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾರ್ ಎಂಬವರು ಬಂಟ್ಬಾಳ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮೃತ ಅಬ್ದುಲ್ ರಹಿಮಾನ್ ಅವರು ಕೊಳ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದು ತೀವ್ರವಾಗಿ ಗಾಯಗೊಂಡ ಕಲಂದರ್ ಶಾಫಿ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಊರಿನ ಜನರೊಂದಿಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ‌.

 

 

ದುಷ್ಕರ್ಮಿಗಳ ಗುಂಪು ಕೋಮು ಭಾವನೆಯಿಂದ ಅಥವಾ ಇನ್ನಾವುದೋ ಕಾರಣಕ್ಕೆ ಅಬ್ದುಲ್ ರಹಿಮಾನ್ ಅವರನ್ನು ಕೊಲೆಗೈದು, ಕಲಂದರ್ ಶಾಫಿ ಅವರನ್ನು ತೀವ್ರವಾಗಿ ಗಾಯಗೊಳಿಸಿ ಕೊಲೆ ಪ್ರಯತ್ನ ಮಾಡಿದ್ದಾರೆ‌ ಎಂದು ದೂರುದಾರ ನಿಸಾರ್ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ದುಷ್ಕರ್ಮಿಗಳಿಂದ ಕೊಲೆಯತ್ನಕ್ಕೀಡಾಗಿದ್ದ ಕಲಂದರ್ ಶಾಫಿ ಅವರು ನೀಡಿದ ಮಾಹಿತಿ ಆಧರಿಸಿ ನಾಸೀರ್ ಅವರು ನೀಡಿದ ದೂರಿನಂತೆ ಬಂಟ್ವಾಳ‌ ಪೊಲೀಸರು ಭಾರತೀಯ ನ್ಯಾಯ‌ ಸಂಹಿತ ಕಾಯ್ದೆಯಡಿ 2023 (Uls-103, 109, 118(1), 118(2), 190, 191(1), 191(2), 191(3) ಅಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ಪ್ರಕರಣ ಬೇಧಿಸಲು 5 ಪೊಲೀಸ್ ತಂಡ ರಚನೆ:

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ‌ಲ್ಲಿ ಆರೋಪಿಗಳ ಬಂಧನಕ್ಕಾಗಿ ಡಿವೈಎಸ್ಪಿ ವಿಜಯ ಪ್ರಕಾಶ್ ನೇತೃತ್ವದಲ್ಲಿ 5 ಪೊಲೀಸ್ ತಂಡಗಳು ರಚಿಸಲಾಗಿದೆ ಎಂದು ತಿಳಿದು ಬಂದಿದೆ.

 

ಸದ್ಯ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಡಿವೈಎಸ್ಪಿ ನೇತೃತ್ವದಲ್ಲಿ ಆರೋಪಿಗಳ ಮಾಹಿತಿ ಕಲೆಹಾಕಲಾಗಿದೆ ಎನ್ನಲಾಗಿದೆ. ಈ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ತಂಡ ಮತ್ತು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿಯಾಗಿ ನಡೆಸಲಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version