Published
11 months agoon
By
Akkare News
ಪುತ್ತೂರು ಮೇ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ ಉಂಟಾದ ಘಟನೆ ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ನಡೆದಿದೆ.




ದಕ್ಷಿಣಕನ್ನಡದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅಪಾರ ಹಾನಿಯುಂಟು ಮಾಡಿದೆ. ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ಮನೆಯೊಂದರ ತಡೆಗೋಡೆ ಕುಸಿದು ಬಿದ್ದಿದೆ. ತಡೆಗೋಡೆ ಕುಸಿತದ ಸಂದರ್ಭ ಯಾರೂ ಇಲ್ಲದ ಪರಿಣಾಮ ಗೊಡ್ಡ ದುರಂತವೊಂದು ತಪ್ಪಿದೆ. ತಡೆಗೋಡೆ ಕುಸಿದ ಪರಿಣಾಮ ಮೂರು ಮನೆಗಳು ಅಪಾಯ ಸ್ಥಿತಿಯಲ್ಲಿದೆ. ತಡೆಗೋಡೆ ಕುಸಿತ ಪ್ರದೇಶಕ್ಕೆ ನಗರಸಭೆಯ ಸದಸ್ಯ ದಿನೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










