Published
1 day agoon
By
Akkare Newsಉಳ್ಳಾಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.
ಮೃತ ಮಗುವನ್ನು ನೌಶಾದ್ ರ ಪುತ್ರಿ ಫಾತಿಮ ನಈಮ(10) ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.
ಘಟನೆ ನಡೆದ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.