Published
9 months agoon
By
Akkare News
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಶಾಲೆಗಳಿಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ, ಇತರೆ ಲಕ್ಷಣ ಕಂಡು ಬಂದಲ್ಲಿ, ಅವರನ್ನು ಶಾಲೆಗೆ ಕಳುಹಿಸದೇ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ, ಆರೈಕಾ ಕ್ರಮ ಪಾಲಿಸಬೇಕು.
ಸಂಪೂರ್ಣ ಗುಣಮುಖವಾದ ನಂತರವೇ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಎಂದು ಸೂಚನೆ ನೀಡಲಾಗಿದೆ. ಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳಲ್ಲಿ ಜ್ವರ, ಕೆಮ್ಮು, ನೆಗಡಿ ಕಂಡು ಬಂದಲ್ಲಿ, ಅಗತ್ಯ ಮುಂಜಾಗೃತಾ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ.