Published
2 days agoon
By
Akkare Newsಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ 64 ಕಿ.ಮೀ. ಉದ್ದದ ಹೆದ್ದಾರಿ ಚತುಷ್ಪತ ಕಾಮಗಾರಿಯಲ್ಲಿ ಕಲ್ಲಡ್ಕ ಬಳಿ ನಿರ್ಮಿಸಲಾದ ಫ್ಲೈ ಓವರ್ ಉದ್ಘಾಟನೆ ಇಂದು ನಡೆಯಿತು.
ಕಲ್ಲಡ್ಕದ ಪೂರ್ಲಿಪ್ಪಾಡಿಯಿಂದ ಕೃಷ್ಣಕೋಡಿಯವರೆಗೆ ಒಟ್ಟು 2.1 ಕಿ.ಮೀ. ಉದ್ದದ ಈ ಮೇಲ್ಸೇತುವೆಯಲ್ಲಿ 70 ಪಿಲ್ಲರ್ ಗಳಿವೆ. ಒಂದರಿಂದ ಇನ್ನೊಂದಕ್ಕೆ 30 ಮೀಟರ್ ಅಂತರವಿದ್ದು, ಒಟ್ಟು 72 ಸ್ಪಾನ್ ಗಳ ಫ್ಲೈಓವರ್ ಇದಾಗಿದೆ.ಕಾಮಗಾರಿ ಆಗುವ ಸಂದರ್ಭದಲ್ಲಿ ತೀರಾ ಕಷ್ಟದಿಂದ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಇಂದು ನಿಟ್ಟಿಸಿರು ಬಿಟ್ಟಿದ್ದಾರೆ,ಸಂತೋಷ ವ್ಯಕ್ತಪಡಿಸಿದ್ದಾರೆ.