Published
9 months agoon
By
Akkare News
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಡಲಾಗಿರುವ ಮಾಸ್ಟರ್ ಪ್ಲಾನ್ ಸರಕಾರದ ಹಂತದಲ್ಲಿ ಪ್ರಸ್ತಾವನೆಗಾಗಿ ಶಾಸಕ ಅಶೋಕ್ ಕುಮಾರ್ ರೈ ದೇವಳದ ಕಛೇರಿ ಹಾಲ್ ನಲ್ಲಿ ಪ್ರಾಜೆಕ್ಟರ್ ಮೂಲಕ ಆರ್ಕಿಟೆಕ್ಟ್ ವಿವರಣೆಯನ್ನು ಪಡೆದು ಪರಿಶೀಲನೆ ನಡೆಸಿದರು.




ಕೆಲವೊಂದು ಬದಲಾವಣೆ ಮಾಡುವಂತೆ ಸೂಚನೆ ನೀಡಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ಈಶ್ವರ ಬೆಡೇಕರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವಾನಾಥ ರೈ ಮೇಗಿನಗುತ್ತು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನ್ಯಾಕ್, ಮುರಳಿಧರ ರೈ ಮಠಂತಬೆಟ್ಟು, ಇಂಜಿನಿಯರ್ ಪಿ ಜಿ ಜಗನ್ನಿವಾಸ ರಾವ್, ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ ವಿ ಶ್ರೀನಿವಾಸ, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಉಪಸ್ಥಿತರಿದ್ದರು. ಅರ್ಬನ್ ಪ್ರೇಮ್ ಪ್ರೈ.ಲಿ. ಇಬ್ಬರು ಇಂಜಿನಿಯರ್ ವಿವಿಧ ಯೋಜನೆಗಳ ಮಾಹಿತಿ ನೀಡಿದರು.











