Published
11 months agoon
By
Akkare News
ಬೆಂಗಳೂರು: ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಕೆಲವೇ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಬಂದಿದ್ದರೂ, ಮುಂಗಾರು ಆರಂಭವಾಗುತ್ತಿದ್ದಂತೆ ಮಳೆ ಕ್ಷೀಣಿಸಿದೆ. ಮೇ ಅಂತ್ಯದಲ್ಲಿ ಎಲ್ಲೆಡೆ ಭಾರಿ ಮಳೆಯಾಗಿ ಅವಾಂತರ ಸೃಷ್ಟಿಸಿತ್ತು.
ಜೂನ್ 10ರ ಬಳಿಕ ಮಳೆ ಚುರುಕುಗೊಳ್ಳಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.