Published
9 months agoon
By
Akkare News
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿ ಬಂದಿದೆ.ಇದೀಗ ಆಸ್ಪತ್ರೆ ಸಿಬ್ಬಂದಿ ತಮ್ಮ ರಕ್ಷಣೆಗಾಗಿ ಆರೋಗ್ಯ ರಕ್ಷಾ ಸಮಿತಿ ಮೊರೆ ಹೋಗಿದ್ದಾರೆ.



ಜೂನ್ 5 ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಗೆ ಬಂದ ರೋಗಿಯ ಕಡೆಯವರು ವಿನಃ ಕಾರಣ ಡಿ ಗ್ರೂಪ್ ನೌಕರರ ವಿರುದ್ಧ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಸರಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರ ಪುರಂದರ ಅವರಿಗೆ ಸ್ಕ್ಯಾನಿಂಗ್ಗೆ ಬಂದ ಕಡೆಯವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ಎಬ್ಬಿಸಿದ್ದಾರೆಂದು ಆರೋಪಿಸಲಾಗಿದೆ.



ಈ ಕುರಿತು ಡಿ ಗ್ರೂಪ್ ನೌಕರರು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನೀಡಿದ ದೂರಿನಂತೆ ಆರೋಗ್ಯ ರಕ್ಷಾ ಸಮಿತಿ ನೇತೃತ್ವದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಮತ್ತು ಇತರ ವೈದ್ಯರು ಹಾಗೂ ಸಿಬ್ಬಂದಿಯೊಂದಿಗೆ ತುರ್ತು ಸಭೆಯನ್ನು ನಡೆಸಿದ್ದಾರೆ.








