Published
9 months agoon
By
Akkare News
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸು ಪಲ್ಟಿಯಾದ ಪರಿಣಾಮ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ.



ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಗುಂಡ್ಯ ಸಮೀಪ ಪಲ್ಟಿಯಾಗಿದ್ದು, ಘಟನೆಯಲ್ಲಿ ಬಸ್ಸಿನಲ್ಲಿದ್ದ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.












