Published
9 months agoon
By
Akkare News
ಪುತ್ತೂರು: ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ವ್ಯಾಪಕ ಹಾನಿ ಸಂಭವಿಸಿರುವ ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮಗಳಿಗೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಕು.ಸ್ಟೆಲ್ಲಾ ವರ್ಗೀಸ್ ಜೂ.7ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಅವರು ಕೋಡಿಂಬಾಡಿ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಪ್ರಾಕೃತಿಕ ವಿಕೋಪದಿಂದ ಉಂಟಾದ ನಷ್ಟದ ಕುರಿತು ಮಾಹಿತಿ ಸಂಗ್ರಹಿಸಿದರಲ್ಲದೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧೀನ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾ.ಪಂ.ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಸದಸ್ಯ ರಾಮಣ್ಣ ಗೌಡ ಗುಂಡೋಳೆ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕ ಮೋಹನ್ ಪಕ್ಕಳ ಕುಂಡಾಪು, ಕಂದಾಯ ನಿರೀಕ್ಷಕ ಚಂದ್ರ ನಾಯ್ಕ್, ಗ್ರಾಮ ಆಡಳಿತಾಧಿಕಾರಿ ಶರಣ್ಯ ,ಪಂಚಾಯತ್ ಕಾರ್ಯದರ್ಶಿ ಅಣ್ಣು ಮತ್ತಿತರರು ಉಪಸ್ಥಿತರಿದ್ದರು.