Published
11 months agoon
By
Akkare Newsಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಬೇಕಾದರೆ 20 ಸಾವಿರ ಲಂಚ ನೀಡಬೇಕು ಎಂದು ಬೇಡಿಕೆ ಇಟ್ಟ ಬ್ರಹ್ಮಾವರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಪೂಜಾರಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ದಿನೇಶ್ ಪೂಜಾರಿ ಎಂಬವರು ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಮೆಸ್ಕಾಂ ಎಇಇ ಭೇಟಿಯಾಗಿದ್ದರು. ಸ್ಥಳ ಪರಿಶೀಲನೆ ನಡೆಸಿದ ಎಇಇ ವಿದ್ಯುತ್ ಸಂಪರ್ಕ ನೀಡಬೇಕಾದರೆ 20 ಸಾವಿರ ಲಂಚ ನೀಡಬೇಕು ಎಂಬ ಬೇಡಿಕೆಯನ್ನು ಇರಿಸಿದ್ದರು. ಈ ಬಗ್ಗೆ ದಿನೇಶ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ದಿನೇಶ್ ಎಂಬಾತನಿಂದ 20 ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮೆಸ್ಕಾಂ ಎಇಇ ಅಶೋಕ್ ಪೂಜಾರಿಯನ್ನು ಬಂಧಿಸಿದ್ದಾರೆ.
ಈ ಹಿಂದೆ ಕುಂದಾಪುರದ ಎಇಇ ಆಗಿದ್ದ ಅಶೋಕ್ ಪೂಜಾರಿ ಕಳೆದ ನಾಲ್ಕು ವರ್ಷಗಳಿಂದ ಬ್ರಹ್ಮಾವರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಮಂಗಳೂರು ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಮಂಜುನಾಥ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು.