Published
9 months agoon
By
Akkare News
ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಮುಂದಾಗಿದ್ದು, ಕೆಲವು ಸಚಿವರಿಗೆ ಕೊಕ್ ನೀಡುವ ಎಲ್ಲಾ ಸಾಧ್ಯತೆ ಇದೆ ಎನ್ನಲಾಗಿದೆ.
ದೆಹಲಿಯಲ್ಲಿ ಈ ಕುರಿತು ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹೈಕಮಾಂಡ್ ಮಹತ್ವದ ಸಭೆ ನಡೆಸುತ್ತಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಸಿಎಂ ಮತ್ತು ಡಿಸಿಎಂ ಅನ್ನು ದೆಹಲಿಗೆ ಬರಲು ಹೇಳಿದೆ. ಈಗಾಗಲೇ ಸಿಎಂ, ಡಿಸಿಎಂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿರುವ ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಭೇಟಿಯಾಗಿ ಚರ್ಚೆ ನಡೆಯುತ್ತಿದೆ.
ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿರುವ ಘಟನೆ ಕುರಿತು ವಿವರ ನೀಡಲಾಗಿದೆ ಎನ್ನಲಾಗಿದೆ. ಹಾಗೆನೇ ಸಿಐಡಿ ತನಿಖೆ, ನ್ಯಾಯಾಂಗ ತನಿಖೆ ಕುರಿತು ಎಲ್ಲಾ ವಿವರ ನೀಡಲಾಗಿದೆ